ಲಂಚ ಸ್ವೀಕರಿಸುತ್ತಿದ್ದ ಲೋಕೇಶ್ ಎಸಿಬಗೆ

ಲಂಚ ಸ್ವೀಕರಿಸುತ್ತಿದ್ದ ಲೋಕೇಶ್ ಎಸಿಬಗೆ

ಕೋಲಾರ, ಆ. 21 : ಲಂಚ ಸ್ವೀಕರಿಸುತ್ತಿದ್ದ ವೇಳೆ ತಾಲ್ಲೂಕು ಕಚೇರಿಯ ಸರ್ವೇ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ತಾಲ್ಲೂಕು ಕಚೇರಿಯ ಸರ್ವೇ ಸೂಪರ್ ವೈಸರ್ ಲೋಕೇಶ್ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ. ತಾಲೂಕಿನ ಬೆಳಮಾರನಹಳ್ಳಿ ಗ್ರಾಮದ ರಂಗಪ್ಪ ಎಂಬುವರ ಬಳಿ ಜಮೀನು ಸರ್ವೇ ಮಾಡಿಕೊಡಲು ಅಧಿಕಾರಿ ಮೂರು ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಚೇರಿಯಲ್ಲಿಯೇ ಈ ಮೂರು ಸಾವಿರ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಸರ್ಕಲ್ ಇನ್ಸ್ ಪೆಕ್ಟರ್ ವೆಂಕಟಚಲಪತಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos