ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಬಂಧನ

ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಬಂಧನ

ಬೆಂಗಳೂರು, ಜ. 10 : ಪ್ರಗತಿಪರ ಚಿಂತಕಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಜಾರ್ಖಾಂಡ್ ರಾಜ್ಯದಲ್ಲಿ ಕರ್ನಾಟಕದ ಎಸ್ಐಟಿ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ಮಹಾರಾಷ್ಟ್ರದ ರಿಷಿಕೇಶ್ ದೇವ್ಡೇಕರ್ ಅಲಿಯಾಸ್ ಮುರಳಿ (44) ಬಂಧಿತ ಆರೋಪಿಯಾಗಿದ್ದಾರೆ. ಗೌರಿ ಹತ್ಯೆಯಲ್ಲಿ ಬಳಸಲಾಗಿದ್ದ ಪಿಸ್ತೂಲ್ ನಾಶಗೊಳಿಸುವಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದ. ಈ ಕೃತ್ಯ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ. ಎರಡೂ ವರ್ಷಗಳ ಬಳಿಕ ಕೊನೆಗೂ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos