ಲಾರಿ ಬಸ್ ಮುಖಾಮುಖಿ ಡಿಕ್ಕಿ

ಲಾರಿ ಬಸ್ ಮುಖಾಮುಖಿ ಡಿಕ್ಕಿ

ಚಿತ್ರದುರ್ಗ, ಸೆ. 27 : ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. 6 ಮಂದಿಗೆ ಗಾಯಗೊಂಡಿರುವ ಘಟನೆ ಹಿರಿಯರು ತಾಲೂಕು ಕಪಿಲೆಹಟ್ಟಿ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ಚಾಲಕ ಪ್ರೇಮನಾಥ್ (53) ಮೃತ ಚಾಲಕ.
ಕಲಬುರ್ಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿದ್ದ 6 ಜನರಿಗೆ ಗಾಯಗಳಾಗಿದ್ದು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos