ನೆಲಮಂಗಲ, ಸೆ. 7: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನಡೆದಿದೆ. ದಾಬಸ್ಪೇಟೆ ನಿವಾಸಿ ನಿಖಿಲ್(35). ನಿಖಿಲ್ ತನ್ನ ಸ್ನೇಹಿತನನ್ನು ಕರೆದುಕೊಂಡು ಬೈಕ್ನಲ್ಲಿ ಹೋಗುತ್ತಿದ್ದಾಗ ಬೆಂಗೂರು ಗ್ರಾಮಾಂತ ಜಿಲ್ಲೆ ನೆಲಮಂಗಲ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯ ಗ್ರಾಮದ ಬಳಿ ಅತಿವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿಖಿಲ್ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಗಾಯಗೊಂಡಿದ್ದು, ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ.