ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಾಯವಾಗಿರುವ ಘಟನೆ ಹಾವೇರಿಯ ರಾಣೇಬೆನ್ನೂರು ತಾಲೂಕಿನ ಹನುಮನಮಟ್ಟಿ ಗ್ರಾಮದ ಬಳಿ ನಡೆದಿದೆ.
ದಾವಣಗೆರೆ ಮೂಲದ ಸುಮಂತ್(23), ದರ್ಶನ್(24) ಹಾಗೂ ಸುನೀಲ್(23) ಮೃತ ದುರ್ದೈವಿಗಳು. ಗೋವಾದಿಂದ ದಾವಣಗೆರೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಇಬ್ಬರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.