ಲತಾ ಮಂಗೇಶ್ಕರ್ ಚೇತರಿಕೆ

ಲತಾ ಮಂಗೇಶ್ಕರ್ ಚೇತರಿಕೆ

ಮುಂಬಯಿ,ನ. 14 : ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಗಂಭೀರವಾಗಿಯೇ ಇದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಈಗಲೂ ತೀವ್ರ ನಿಗಾ ಘಟಕದಲ್ಲಿ ಕೃತಕ ಉಸಿರಾಟದ ವ್ಯವಸ್ಥೆಯಲ್ಲೇ ಇರಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದಿದ್ದಾರೆ ವೈದ್ಯರು. ಇದೇ ವೇಳೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಹಿರಿಯ ಗಾಯಕಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos