ಕೆಎಸ್ಆರ್‌ಟಿಸಿ ಪಲ್ಲಕ್ಕಿ ಬಸ್’ಗಳಿಗೆ ಸಿಎಂ ಹಾಗೂ ಡಿಸಿಎಂ ಚಾಲನೆ

ಕೆಎಸ್ಆರ್‌ಟಿಸಿ ಪಲ್ಲಕ್ಕಿ ಬಸ್’ಗಳಿಗೆ ಸಿಎಂ ಹಾಗೂ ಡಿಸಿಎಂ ಚಾಲನೆ

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಆಯೋಜಿಸಿರುವ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಹಾಗೂ 4 ಎಸಿ ಅತ್ಯಾಧುನಿಕ ಸ್ಲೀಪರ್ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಚಾಲನೆ ನೀಡಿದರು. ಈ ನಡುವೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸಂಪುಟ ಸಹೋದ್ಯೋಗಿಗಳೊಂದಿಗೆ ಬಸ್ ಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಮುನಿಯಪ್ಪ, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಹಾಗೂ ಸಾರಿಗೆ ಅಧಿಕಾರಿಗಳು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos