ಪತ್ನಿಯೊಂದಿಗೆ ಕೂಡಿ ವಕೀಲನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಪತ್ನಿಯೊಂದಿಗೆ ಕೂಡಿ ವಕೀಲನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಹೈದರಾಬಾದ್, ಏ. 27, ನ್ಯೂಸ್ ಎಕ್ಸ್ ಪ್ರೆಸ್:  ಹೈದರಾಬಾದ್: ಎಲ್‍ಎಲ್‍ಬಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ವಕೀಲನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಕೀಲನನ್ನು ರಾಮಾ ರಾವ್ ಎಂದು ಗುರುತಿಸಲಾಗಿದೆ. ಏಪ್ರಿಲ್ 26 ರಂದು ವಿದ್ಯಾರ್ಥಿನಿ ಈತನ ವಿರುದ್ಧ ಚಿಲ್ಕಲ್ ಗುಡ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ. ಈತ ಹೈದರಾಬಾದ್ ನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದು, ವಿದ್ಯಾರ್ಥಿನಿ ಇಂಟರ್ನ್ ಶಿಪ್ ಮಾಡಲೆಂದು ಈತನನ್ನು ಭೇಟಿಯಾಗಿದ್ದಾಳೆ. ಈ ವೇಳೆ ಆತ ತನ್ನ ವಿಸಿಟಿಂಗ್ ಕಾರ್ಡ್ ನೀಡಿ ಮತ್ತೊಮ್ಮೆ ಭೇಟಿ ಮಾಡುವಂತೆ ಹೇಳಿದ್ದಾನೆ. ಅಲ್ಲದೆ ಏಪ್ರಿಲ್ 21ರಂದು ಆರೋಪಿ ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಹೀಗೆ ಮನೆಗೆ ಬಂದಾಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ನಂತರ ಏಪ್ರಿಲ್ 25ರಂದು ಕೂಡ ಮತ್ತೆ ವಿದ್ಯಾರ್ಥಿನಿಯನ್ನು ಮನೆಗೆ ಕರೆದು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ನಿರಾಕರಿಸಿದ್ದಕ್ಕೆ ಬೆದರಿಕೆ ಹಾಕಿದ್ದಾನೆ. ಪತಿಯ ನೀಚ ಕೃತ್ಯಕ್ಕೆ ಪತ್ನಿ ಕೂಡ ಸಹಾಯ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ಶುಕ್ರವಾರ ಅತ್ಯಾಚಾರ(378), ಜೀವಬೆದರಿಕೆ(506)ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos