ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು

ಬೆಂಗಳೂರು: ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ.

ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚುನಾವಣಾ ಅಧಿಕಾರಿ‌ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ ಏಪ್ರಿಲ್​.30ರಂದು ಕೋರ್ಟ್​ಗೆ ಹಾಜರಾಗುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos