ಮೃತ ನೇಹಾ ನಿವಾಸಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೃತ ನೇಹಾ ನಿವಾಸಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಪಾಗಲ್ ಪ್ರೇಮಿ ಫಯಾಜ್ ನಿಂದ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹುಬ್ಬಳ್ಳಿ ಬಿಡ್ನಾಳ್ ಬಡವಾಣೆಯಲ್ಲಿರುವ ನೇಹಾ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು. ಈ ವೇಳೆ ನೇಹಾ ಪೋಷಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ನೇಹಾ ಕುಟುಂಬ‍ಕ್ಕೆ ನ್ಯಾಯ ಕೊಡಿಸುತ್ತೇವೆ. ಕುಟುಂಬಸ್ಥರ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದರು.

ಈ ಸಮಯದಲ್ಲಿ ಹುಬ್ಬಳ್ಳಿ ಪೋಲಿಸ್ ಆಯುಕ್ತರಾದ ರೇಣುಕಾ ಶಶಿಕುಮಾರ್, ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ್, ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಸುವರ್ಣ ಕಲ್ಲಕುಂಟ್ಲ, ಮೋಹನ್ ಲಿಂಬಿಕಾಯಿ, ಬಂಗಾರೇಶ್ ಹಿರೇಮಠ್, ರಾಜಶೇಖರ್ ಮೆಣಸಿನಕಾಯಿ ಹಾಗೂ ಅನೇಕರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos