ನವದೆಹಲಿ, ಸೆ. 19: ಇಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಇಡಿ ಸಮನ್ಸ್ ಹಿನ್ನಲೆಯಲ್ಲಿ ನವದೆಹಲಿಯ ಲೋಕನಾಯಕ ಭವನದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು
ಕಳೆದ ಸೆ. 14ರಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಆದರೇ ಹಾಜರಾಗಿರಲಿಲ್ಲ. ಮತ್ತೊಮ್ಮೆ ಇಡಿ ಅಧಿಕಾರಿಗಳು ಸೆ.19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರ ಹಿನ್ನಲೆಯಲ್ಲಿ ಇಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆಗೆ ಹಾಜರಾಗಿದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ಮಾಜಿ ಸಚಿವೆ ಮೋಟಮ್ಮ ಅವರ ಮಗಳು ನಯನ, ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಕೂಡ ಜೊತೆಗೆ ಇದ್ದರು. ಇಂತಹ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಡಿಕೆ ಶಿವಕುಮಾರ್ ಜೊತೆಗಿನ ವ್ಯವಹಾರದ ಬಗ್ಗೆ ಪ್ರಶ್ನೆಯನ್ನು ಇಡಿ ಅಧಿಕಾರಿಗಳು ಮಾಡಲಿದ್ದಾರೆ ಎಲ್ಲಲಾಗುತ್ತಿದೆ.