ಬೆಂಗಳೂರು: ಬಿಜೆಪಿಯ ಶಾಸಕ ಮುನಿರತ್ನ ಅವರು ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದಡಿ ಈಗಾಗಲೇ ನ್ಯಾಯಾಂಗಾನ ಬಂದನದಲ್ಲಿರುವ ಮುನಿರತ್ನ ಅವರ ವಿರುದ್ಧ ಇದೀಗ ಒಕ್ಕಲಿಗ ನಾಯಕರು ಸಿರಿದಿಟ್ಟಿದ್ದಾರೆ.
ಹೌದು, ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಒಕ್ಕಲಿಗ ರಾಜಕಾರಣಿಗಳು ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರು ಹಾಗೂ ಸಚಿವರು ನೇರವಾಗಿ ಇಂದು (ಸೋಮವಾರ ಸೆ. 16) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮುನಿರತ್ನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಶಾಸಕರಾದ ಎಚ್.ಸಿ.ಬಾಲಕೃಷ್ಣ, ಶರತ್ ಬಚ್ಚೇಗೌಡ ಸೇರಿದಂತೆ ಒಕ್ಕಲಿಗ ಸಮುದಾಯ ನಾಯಕರ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದೆ. ಒಕ್ಕಲಿಗ ಸಮುದಾಯವನ್ನು ಅವಾಚ್ಯವಾಗಿ ನಿಂದಿಸಿರುವ ಶಾಸಕ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಎಂಗೆ ಮನವಿ ಮಾಡಿದ್ದಾರೆ.
ಒಂದು ಜಾತಿಯ ಬಗ್ಗೆ ಮುನಿರತ್ನ ಅವರು ಕೀಳಾಗಿ ಮಾತನಾಡಿದ್ದು, ಇದರಿಂದ ಒಕ್ಕಲಿಗ ಸಮುದಾಯಕ್ಕೆ ಭಾರಿ ನೋವುಂಟಾಗಿದೆ. ಈ ಬಗ್ಗೆ ತನಿಖೆ ನಡೆಸಿ, ಕೂಡಲೇ ಮುನಿರತ್ನ ವಿರುದ್ಧ ಸೂಕ್ತ ಜರುಗಿಸಬೇಕು ಎಂದು ಕೇಳಿಕೊಂಡಿದ್ದಾರೆ.