ಆಟವಾಡಿಸುತ್ತಿದ್ದ ಕಿಲಾಡಿ ಚಿರತೆ ಕೊನೆಗೂ ಸೆರೆ.!

ಆಟವಾಡಿಸುತ್ತಿದ್ದ ಕಿಲಾಡಿ ಚಿರತೆ ಕೊನೆಗೂ ಸೆರೆ.!

ಬೆಂಗಳೂರು: ಬೆಂಗಳೂರಿನ ಬೊಮ್ಮನಹಳ್ಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಓಡಾಡುತ್ತಿದ್ದ ಕಿಲಾಡಿ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಪದೇ ಪದೇ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತತಪ್ಪಿಸಿ ಓಡಾಡುತ್ತಿದ್ದ ಚಿರತೆ ಮೂರು ದಿನಗಳ ನಂತರ ಇಂದು ಸಿಕ್ಕಿ ಬಿದ್ದಿದೆ. ಕಳೆದ ಎರಡು ದಿನಗಳಲ್ಲಿ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ತಂದೊಡ್ಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸತತ ಕಾರ್ಯಾಚರಣೆ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಈ ಭಾಗದ ಜನರು ನಿಟ್ಟುಸಿರುಬಿಟ್ಟಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸತೀಶ್ ರೆಡ್ಡಿ ಅವರು, ನಗರದಲ್ಲಿ ಮೂರ್ನಾಲ್ಕು ದಿನದಿಂದ ನಿರಂತರವಾಗಿ ನಿದ್ದೆ, ಊಟ ಇಲ್ಲದೆ ಅರಣ್ಯ ಅಧಿಕಾರಿಗಳು ಹೆಚ್ಚು ಶ್ರಮ ಪಟ್ಟಿದ್ದಾರೆ. ಈ ಎಲ್ಲಾ ಶ್ರೇಯಸ್ಸು ಅರಣ್ಯ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸಲ್ಲಬೇಕು ಎಂದು ಹೇಳಿದ್ದಾರೆ.

ಚಿರತೆಯನ್ನು ಸೆರೆ ಹಿಡಿಯುವ ಸಂದರ್ಭದಲ್ಲಿ ಕೆಲವು ಅರಣ್ಯ ಅಧಿಕಾರಿಗಳಿಗೆ ಗಾಯವಾಗಿದೆ ಈ ಗಾಯಗೊಂಡ ಅಧಿಕಾರಿಗಳಿಗೆ ಆಸ್ಪತ್ರೆ ವೆಚ್ಚವನ್ನು ನನ್ನ ಸ್ವಯಿಚ್ಛೆಯಿಂದ ಎರಡು ಲಕ್ಷ ಹಣವನ್ನು ನೀಡುತ್ತೇನೆ ಎಂದು ಈ ಸಂದರ್ಭದಲ್ಲಿ ಶಾಸಕ ಸತೀಶ್ ರೆಡ್ಡಿ ಅವರು ಹೇಳಿದರು.

ಬೊಮ್ಮನಹಳ್ಳಿಯ ಕೂಡ್ಲುಗೇಟ್ ಬಳಿ ಪಾಳುಬಿದ್ದ ಕಟ್ಟಡದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಚಿರತೆ ಕಟ್ಟಡದಲ್ಲಿ ಇರುವುದನ್ನು ಪತ್ತೆಹಚ್ಚಿದ ಥರ್ಮಲ್ ಡ್ರೋನ್ ಪತ್ತೆ ಮಾಡಿತ್ತು. ಇದರ ಆಧಾರದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆ ನಡೆಸಿ ಕೊನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಬಳಿಕ ಬಲೆ ಮೂಲಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಇದರೊಂದಿಗೆ ಮೈಸೂರು ಲೆಪರ್ಡ್ ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಯಶಸ್ವಿಯಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos