ಬೆಂಗಳೂರು: ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ನಿಯಮವನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕಠಿಣ ನಿಯಮಗಳು ಮತ್ತು ನಿಬಂಧನೆಗಳನ್ನು ಹೊರತರಲು ಯೋಜಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಎಸ್ ಖಲೀಮ್ ಸಾಬ್ ಇಂದು ಹೇಳಿದರು.
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಉದ್ಯಮಿದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತ ಎಸ್ ಖಲೀಮ್ ಸಾಬ್ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿದ್ದು ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಗೆ ಆಗಿದೆ.
ಸರ್ಕಾರದ ಆದೇಶನ್ವಯ ಯಾವುದೇ ಉದ್ಯಮೀಯ ನಾಮಫಲಕವು ಪ್ರಧಾನವಾಗಿ ಶೇಕಡ 60ರಷ್ಟು ಸ್ಥಳ ಮೀಸಲಿ ಇರಿಸಿ ಕನ್ನಡದಲ್ಲಿ ಇರಬೇಕು ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿಸುವಾಗುವಂತೆ ಹಾಗೂ ಅನ್ಯ ಭಾಷೆ ನಾಮ ಫಲಕಕ್ಕಿಂತ ಕನ್ನಡ ನಾಮಪಲಕ ಮೇಲ್ಬಾಗದಲ್ಲಿರುವಂತೆ ಮತ್ತು ದೊಡ್ಡದಾಗಿರುವಂತೆ ಅಳವಡಿಸಬೇಕು.