ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ: ಡಿಕೆಶಿ

ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ: ಡಿಕೆಶಿ

ಬೆಂಗಳೂರು: ಸಮಾಜ ಸುಭದ್ರವಾಗಿರಲು 4 ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು ಬಂದಿದೆ. ಇಡೀ ವಿಶ್ವಕ್ಕೆ ದೊಡ್ಡ ಸೇವೆ ಮಾಡುವ ಕಾರ್ಮಿಕರ ದಿನವಿಂದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘಿಸಿದರು.

ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು (ಗುರುವಾರ ಮೇ. 01) ರಂದು ನಡೆದ ಪೌರ-ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಾವು ವಿರೋಧ ಪಕ್ಷದಲ್ಲಿದ್ದಾಗ ಹಾಗೂ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಪೌರ ಕಾರ್ಮಿಕರನ್ನು ಸರ್ಕಾರಿ ಕಾರ್ಮಿಕರನ್ನಾಗಿ ಮಾಡುವ ಮಾತು ಕೊಟ್ಟಿದ್ದೆವು. ನಾವುಗಳು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಪೌರ ಕಾರ್ಮಿಕರ ಮಕ್ಕಳೇ ಇಂದು ಈ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ, ಬುದ್ಧಿವಂತರಾಗಿ ದೊಡ್ಡ ಹುದ್ದೆ ಅಲಂಕರಿಸುವಂತೆ ಮಾಡಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದರು. ಇದನ್ನೂ ಓದಿ: ಕಾಶ್ಮೀರ ದಾಳಿ; Pak ಗೆ ಸಿಂಧೂ ನದಿ ನೀರು ಒಪ್ಪಂದಕ್ಕೆ ಬ್ರೇಕ್!

ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ. ಪೌರಕಾರ್ಮಿಕರನ್ನು ಕುವೆಂಪು ಅವರು ಶಿವನಿಗೆ ಹೋಲಿಸಿದ್ದರು. ‘ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ. ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ. ಅಂಜದಿರು ಸೋದರನೇ ನಿಮ್ಮ ಜತೆ ನಾವಿದ್ದೇವೆ’ ಎಂದು ಕುವೆಂಪು ಅವರು ಹೇಳಿದ್ದರು. ಇಂದು ನಿಮ್ಮ ಬದುಕು ಬದಲಾವಣೆಯಾಗುತ್ತಿರುವ ಬಹಳ ಪವಿತ್ರವಾದ ದಿನ. ಇಂದು ನೀವು ಸರ್ಕಾರಿ ನೌಕರರಾಗಿದ್ದೀರಿ ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos