ಉ.ಚು ಗೆ ‘ಕೈ’ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಉ.ಚು ಗೆ  ‘ಕೈ’ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು, ಅ. 15:  ಕಾಂಗ್ರೆಸ್ ಗೆ ಕೈಕೊಟ್ಟ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ  ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು,  ಬೆಂಗಳೂರು ವಿಭಾಗದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಕೆ. ಸಿ. ವೇಣುಗೋಪಾಲ್  ನೇತೃತ್ವದಲ್ಲಿ  ಚರ್ಚೆ ನಡೆಯಿತು. ಹೊಸಕೋಟೆ, ಕೆ. ಆರ್. ಪುರಂ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಶಿವಾಜಿನಗರ ಮತ್ತು ಚಿಕ್ಕಬಳ್ಳಾಪುರ ಮುಂತಾದ  ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಾಯಿತು.

 

ಫ್ರೆಶ್ ನ್ಯೂಸ್

Latest Posts

Featured Videos