ಮಂಡ್ಯ, ಮೇ. 31, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಮುಗಿತು ಈಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯ ಹಬ್ಬ. ಹೌದು, ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.
8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯತಿಗಳ 1,296 ವಾರ್ಡ್ ಗಳಲ್ಲಿ 4,360 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಲೋಕಸಭೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ.
ಮಂಡ್ಯ ಜಿಲ್ಲೆಯ 3 ಪುರಸಭೆಗಳಲ್ಲಿ ಜಿಡಿಎಸ್ ಪಾರಮ್ಯ ಮರೆದಿದೆ. ಶ್ರೀರಂಗಪಟ್ಟಣ ಪುರಸಭೆಯ 23 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬರೋಬ್ಬರಿ 12 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಹಾದಿ ಸುಲಭ ಮಾಡಿಕೊಂಡಿದೆ. ಕಾಂಗ್ರೆಸ್ 8, ಬಿಜೆಪಿ-1, ಪಕ್ಷೇತರರು- 2 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಮಳವಳ್ಳಿ ಪುರಸಭೆಯ 23 ವಾರ್ಡ್ ಗಳ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದ್ದು, 9 ಜೆಡಿಎಸ್. 5 ಕಾಂಗ್ರೆಸ್, 2 ರಲ್ಲಿ ಬಿಜೆಪಿ ಗೆದ್ದಿದ್ದು, 7 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
ಕೆ.ಆರ್.ಪೇಟೆ ಪುರ ದಲ್ಲಿ ಕಾಂಗ್ರೆಸ್ 10, ಜೆಡಿಎಸ್ 11,ಬಿಜೆಪಿ 1 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಇಲ್ಲೂ ಕೂಡ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.