ಇಂದು ‘ಲೋಕಲ್ ವಾರ್’ ಫಲಿತಾಂಶ

ಇಂದು ‘ಲೋಕಲ್ ವಾರ್’ ಫಲಿತಾಂಶ

ಬೆಂಗಳೂರುಮೇ. 31, ನ್ಯೂಸ್‍ ಎಕ್ಸ್ ಪ್ರೆಸ್: ಲೋಸಸಭಾ ಚುನಾವಣೆಯಲ್ಲಿ  ಬೆನ್ನಲೆ ಸ್ಥಳೀಯ  ಸಂಸ್ಥೆ ಚುನಾವಣೆಯಲ್ಲಿ ಯಾವ್ಯಾವ ಜಿಲ್ಲೆಗಳಲ್ಲಿ ಯಾವ ಪಕ್ಷ ಗೆಲುವು ಸಾಧಿಸುತ್ತೆ..? ಎನ್ನುವುದೇ ಕುತೂಹಲಕಾರಿ ವಿಚಾರವಾಗಿದೆ. ರಾಜ್ಯದ ಹಲವು ಸ್ಥಳೀಯ ಸಂಸ್ಥೆಗಳಿಗೆ ಮೊನ್ನೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ರಾಜ್ಯದ 7 ನಗರಸಭೆ, 30 ಪುರಸಭೆ, 19 ಪಟ್ಟಣ ಪಂಚಾಯ್ತಿ ಸೇರಿದಂತೆ 1,361 ವಾರ್ಡ್‌ಗಳಲ್ಲಿ ನಡೆದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

19 ಪಟ್ಟಣ ಪಂಚಾಯಿತಿ :

ಮೊಳಕಾಲ್ಮೂರು, ಹೊಳಲ್ಕೆರೆ, ಶಿರಾಳಕೊಪ್ಪ, ಸೊರಬ, ಹೊಸನಗರ, ತುರುವೇಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರ, ಮೂಲ್ಕಿ, ಸುಳ್ಯ, ಆಲೂರು, ಅರಕಲಗೂಡು, ಯಳಂದೂರು, ಹನೂರು, ಕಲಘಟಗಿ, ಅಳ್ನಾವರ, ಔರಾದ್‌, ಹೊನ್ನಾವರ, ಸಿದ್ದಾಪುರ, ಕಮಲಾಪುರ

ಲೋಕಸಮರದ ಅಬ್ಬರ ಬಳಿಕ ಸ್ಥಳೀಯ ಸಂಸ್ಥೆಗಳ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದ್ದು ಯಾವ್ಯಾವ ಜಿಲ್ಲೆಗಳಲ್ಲಿ ಯಾವ ಪಕ್ಷ ಗೆಲುವು ಸಾಧಿಸುತ್ತೆ..? ಅನ್ನೋದು ಗೊತ್ತಾಗಲು ಕೆಲವು ಕ್ಷಣಗಳು ಮಾತ್ರ ಬಾಕಿ.

7 ನಗರಸಭೆ: ಹಿರಿಯೂರು, ಹರಿಹರ, ಶಹಾಪುರ, ಶಿಡ್ಲಘಟ್ಟ, ತಿಪಟೂರು, ನಂಜನಗೂಡು, ಬಸವಕಲ್ಯಾಣ ನಗರಸಭೆಗಳ ಫಲಿತಾಂಶ ಇಂದು ಹೊರ ಬೀಳಲಿದೆ

30 ಪುರಸಭೆ:  ಆನೇಕಲ್‌, ದೇವನಹಳ್ಳಿ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಬಾಗೇಪಲ್ಲಿ, ಪಾವಗಡ, ಕುಣಿಗಲ್‌, ಕೆ.ಆರ್‌. ನಗರ,
ಬನ್ನೂರು, ಕಡೂರು, ಮೂಡಬಿದಿರೆ, ಮಳವಳ್ಳಿ, ಕೆ.ಆರ್‌. ಪೇಟೆ, ಶ್ರೀರಂಗಪಟ್ಟಣ, ಗುಂಡ್ಲುಪೇಟೆ, ಬಾಗೇವಾಡಿ, ಇಂಡಿ, ತಾಳಿಕೋಟೆ, ನವಲಗುಂದ, ಮುಂಡರಗಿ, ನರಗುಂದ, ಬ್ಯಾಡಗಿ, ಶಿಗ್ಗಾಂವಿ, ಭಟ್ಕಳ, ಭಾಲ್ಕಿ, ಹುಮ್ನಾಬಾದ್‌, ಚಿಟಗುಪ್ಪ, ಸಂಡೂರು, ಹರಪನಹಳ್ಳಿ, ಹೂವಿನಹಡಗಲಿ

 

ಫ್ರೆಶ್ ನ್ಯೂಸ್

Latest Posts

Featured Videos