ಮತ್ತೆ ಮಂತ್ರಿ ಮಾಲ್ ಗೆ ಬೀಗ ಹಾಕಿದ ಬಿಬಿಎಂಪಿ

ಮತ್ತೆ ಮಂತ್ರಿ ಮಾಲ್ ಗೆ ಬೀಗ ಹಾಕಿದ ಬಿಬಿಎಂಪಿ

ಬೆಂಗಳೂರು: ಕೋಟಿ ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಬೀಗ ಜಡಿದಿದ್ದಾರೆ. ಸುಮಾರು 32 ಕೋಟಿ ವರೆಗೂ ಮಂತ್ರಿ ಮಾಲ್ ತೆರಿಗೆ ಪಾವತಿ ಉಳಿಸಿಕೊಂಡಿದೆಯಂತೆ. ಈ ಹಿಂದೆಯೂ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಾಲ್ ಗೆ ಬೀಗ ಹಾಕಲಾಗಿತ್ತು. ಇದೀಗ ಮತ್ತೆ ಇಂದು ಮಾಲ್ ಗೆ ಬೀಗ ಹಾಕಿದ್ದು, ಮುಖ್ಯ ಪ್ರವೇಶ ದ್ವಾರಕ್ಕೆ ಅಧಿಕಾರಿಗಳು ಬೀಗ ಜಡಿದಿರುವುದನ್ನು ಕಂಡು ಎಂದಿನಂತೆ ಕೆಲಸಕ್ಕೆ ಬಂದಿದ್ದ ಸಿಬ್ಬಂದಿ ಶಾಕ್ ಆಗಿದ್ದಾರೆ.

ತೆರಿಗೆ ಪಾವತಿ ಬಾಕಿ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಜಡಿಯಲಾಗಿದೆ. ಹೌದು ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಮಂತ್ರಿ ಮಾಲ್ ಗೆ ಬೇಗ ಜಡಿದಿದ್ದಾರೆ ಎಂದು ತಿಳಿದು ಬಂದಿದೆ.
ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಸ್ಕ್ವೇರ್ ಮಾಲ್ ಗೆ ಬಿಬಿಎಂಪಿ ಬೀಗ ಜಡೆಯುತ್ತಿರುವುದು ಇದೇ ಮೊದಲಲ್ಲ.. ಈ ಹಿಂದೆ ಕೂಡ 3/4 ಬಾರಿ ಬೀಗ ಹಾಕಲಾಗಿತ್ತು. ಈ ಹಿಂದೆಯೂ ಕೂಡ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಗೆ ಬೀಗ ಹಾಕಿದ್ದು ಬಳಿಕ ಮಂತ್ರಿ ಹೈಕೋರ್ಟ್ ಆದೇಶ ನೀಡಿತ್ತು.

ಫ್ರೆಶ್ ನ್ಯೂಸ್

Latest Posts

Featured Videos