ಲೋಕಸಭೆ ಚುನಾವಣೆ ದಿನಾಂಕ ನಾಳೆ ಘೋಷಣೆ

ಲೋಕಸಭೆ ಚುನಾವಣೆ ದಿನಾಂಕ ನಾಳೆ ಘೋಷಣೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕವನ್ನು ನಾಳೆ ಘೋಷಣೆ ಮಾಡಲಿದೆ. ಈ ಬಗ್ಗೆ ನಾಳೆ ಮಧ್ಯಾಹ್ನ ಸುದ್ದಿಗೋಷ್ಠಿ ಕರೆದಿದೆ. 2024ರ ಲೋಕಸಭೆ ಚುನಾವಣೆ ಹಾಗೂ ವಿವಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಣೆ ಮಾಡುವ ನಿಟ್ಟಿನಲ್ಲಿ ಮಾರ್ಚ್‌ 16 ರಂದು ಸುದ್ದಿಗೋಷ್ಠಿ ಕರೆಯಲಾಗಿದೆ.

ವಿಜ್ಞಾನ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.ಲೋಕಸಭೆ ಚುನಾವಣೆಯೊಂದಿಗೆ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಹಾಗೂ ಆಂಧ್ರಪ್ರದೇಶ ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನೂ ಘೋಷಣೆ ಮಾಡಲಿದೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆಯು 7 ರಿಂದ 8 ಹಂತಗಳಲ್ಲಿ ನಡೆಯುವ ಸಾಧ್ಯತೆ ಇದೆ.

ಇದು ಚುನಾವಣಾ ಆಯೋಗದ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇದು ನೇರ ಪ್ರಸಾರವಾಗಲಿದೆ.  ನೂತನವಾಗಿ ನೇಮಕಗೊಂಡ ಆಯುಕ್ತರ ಔಪಚಾರಿಕ ಸ್ವಾಗತದ ನಂತರ ಪೂರ್ಣ ಆಯೋಗದ ಸಭೆ ಆರಂಭವಾಯಿತು. ಈ ಸಭೆ ಸುಮಾರು 45 ನಿಮಿಷಗಳ ಕಾಲ ನಡೆದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos