ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್!

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್!

ನವದೆಹಲಿ: ದೇಶದ ಸಾರ್ವತ್ರಿಕ ಲೋಕಸಭಾ ಚುನಾವಣೆ 2024ಕ್ಕೆ ದಿನಾಂಕ ಘೋಷಣೆ ಆಗಿದೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಚುನಾವಣೆ ಆಯೋಗವು ಚುನಾವಣೆ ದಿನಾಂಕ, ನಾಮಪತ್ರ ಸಲ್ಲಿಕೆ, ಪರಿಶೀಲನೆ, ಮತದಾನ ದಿನಾಂಕ ಸೇರಿದಂತೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಪ್ರಕಟಿಸಿದೆ. ಚುನಾವಣೆ ಘೋಷಣೆಯಾದ ಶನಿವಾರ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಭಾರತೀಯ ಚುನಾವಣೆ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಅಂತ್ಯದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು ಉತ್ತರ ಕರ್ನಾಟಕ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos