ಲೋಕಸಭಾ ಚುನಾವಣೆಯಲ್ಲಿ ಮೈತ್ರಿ

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ

ಮಾ. 5, ನ್ಯೂಸ್ ಎಕ್ಸ್ ಬೆಂಗಳೂರು :  ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತೇವೆ  ಎಂದು ಘೋಷಣೆ ಮಾಡಿವೆ. ಆದರೆ, ಸೀಟು ಹಂಚಿಕೆಯ ವಿಚಾರದಲ್ಲಿ ಮೈತ್ರಿಗೆ ದೊಡ್ಡ ಸವಾಲಾಗುತ್ತಿದೆ.

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನೇನ್ನೆ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಲಾಯಿತು. ತಾನು ಬೇಡಿಕೆ ಇಟ್ಟಿರುವ ಸೀಟುಗಳ ಪಟ್ಟಿಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ಗೆ ನೀಡಿತು.

ಸಭೆಯ ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಜೆಡಿಎಸ್ನವರು 12 ಕ್ಷೇತ್ರಗಳನ್ನು ಅಪೇಕ್ಷಿಸಿದ್ದಾರೆ. ಸರಿಯಾದ ದಿಕ್ಕಿನಲ್ಲಿಯೇ ಚರ್ಚೆ ಆಗಿದೆ. ಉಳಿದ ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ, ಅಂತಿಮ ರೂಪ ಕೊಟ್ಟಿಲ್ಲ’ ಎಂದು ಹೇಳಿದ್ದಾರೆ.

ಸಮನ್ವಯ ಸಮಿತಿ ಸಭೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ‘ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಮ್ಮೆಲ್ಲರ ಗುರಿ. ಕ್ಷೇತ್ರಗಳ ಸಂಖ್ಯೆ ಮುಖ್ಯವಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos