ಸರ್ಕಾರಿ ಆಸ್ಪತ್ರೆಗಳಲ್ಲಿ‌ ಲೋಕಾಯುಕ್ತ ಪರಿಶೀಲನೆ!

ಸರ್ಕಾರಿ ಆಸ್ಪತ್ರೆಗಳಲ್ಲಿ‌ ಲೋಕಾಯುಕ್ತ ಪರಿಶೀಲನೆ!

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಸಾರ್ವಜನಿಕರಿಂದ ಸಾಲು-ಸಾಲು ದೂರು ಬಂದ ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಸರ್ಕಾರಿ ಆಸ್ಪತ್ರೆಗಳಲ್ಲಿ‌ ಲೋಕಾಯುಕ್ತ ಪರಿಶೀಲನೆ ನಡೆದಿದೆ. 10 ತಂಡಗಳು ಪ್ರತ್ಯೇಕವಾಗಿ ಸರ್ಕಾರಿ ಆಸ್ಪತ್ರೆಗಳ ಮೇಲೆ‌ ಭೇಟಿ ನೀಡಿ. ಚಿಕಿತ್ಸೆ ವಿಳಂಬ, ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ, ರೋಗಿಗಳ ಜೊತೆ ಅನುಚಿತ ವರ್ತನೆ, ಅವಧಿ‌ ಮೀರಿದ ಔಷಧಿ ವಿತರಣೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅಧಿಕಾರಿಗಳ ಮುಖಾಂತರ ಗೌಪ್ಯ ತನಿಖೆ ನಡೆಸಿ ಮಾಹಿತಿ ಸಂಗ್ರಹಿಸಿ, ಅಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಖಾತ್ರಿಪಡಿಸಿಕೊಂಡಿಕೊಂಡಿದ್ದರು.

 

 

 

ಫ್ರೆಶ್ ನ್ಯೂಸ್

Latest Posts

Featured Videos