ಲಂಡನ್ ಆಸ್ತಿ ಖರೀದಿ ವಿಚಾರ: ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು

ಲಂಡನ್ ಆಸ್ತಿ ಖರೀದಿ ವಿಚಾರ: ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು

ಬೆಂಗಳೂರು, ಏ. 1, ನ್ಯೂಸ್ ಎಕ್ಸ್ ಪ್ರೆಸ್: ರಾಬರ್ಟ್ ವಾದ್ರಾ ಅವರು ಎರಡು ಅವ್ಯವಹಾರ ಪ್ರಕರಣಗಳನ್ನ ಎದುರಿಸುತ್ತಿದ್ಧಾರೆ. ವಾದ್ರಾ ಅವರು ಪ್ರಕರಣದ ದಿಕ್ಕು ತಪ್ಪಿಸಬಹುದು. ಅವರನ್ನು ವಿಚಾರಣೆಗೆ ಕಸ್ಟಡಿಗೆ ಒಪ್ಪಿಸಿ ಎಂದು ಇ.ಡಿ. ಮಾಡಿಕೊಂಡ ಮನವಿಯನ್ನು ಕೋರ್ಟ್ ಪುರಸ್ಕರಿಸಿಲ್ಲ. ಅವ್ಯವಹಾರ ಪ್ರಕರಣವೊಂದರ ಸಂಬಂಧ ರಾಬರ್ಟ್ ವಾದ್ರಾ ಮತ್ತು ಅವರ ಸಹಚರ ಮನೋಜ್ ಅರೋರಾ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ಅಂಗೀಕರಿಸಿ ಜಾಮೀನು ಮಂಜೂರು ಮಾಡಿದೆ. ಇವರ ಮಧ್ಯಂತರ ಜಾಮೀನು ಅವಧಿ ಮುಗಿದಿದ್ದರಿಂದ ನಿರೀಕ್ಷಣಾ ಜಾಮೀನಿಗೆ ಮನವಿ ಮಾಡಿಕೊಂಡಿದ್ದರು. ಇದೇ ವೇಳೆ, ವಿಚಾರಣೆ ನಡೆಸಲು ವಾದ್ರಾ ಅವರನ್ನು ಕಸ್ಟಡಿಗೆ ಒಪ್ಪಿಸಬೇಕೆಂದು ಜಾರಿ ನಿರ್ದೇಶನಾಲಯ ಮಾಡಿಕೊಂಡ ಮನವಿಯನ್ನು ಕೋರ್ಟ್ ಪುರಸ್ಕರಿಸಲಿಲ್ಲ. ಪ್ರಿಯಾಂಕಾ ಗಾಂಧಿ ಅವರ ಪತಿಯಾಗಿರುವ ರಾಬರ್ಟ್ ವಾದ್ರಾ ಅವರು ಲಂಡನ್​ನಲ್ಲಿ ಆಸ್ತಿ ಖರೀದಿ ವಿಚಾರದಲ್ಲಿ ಅಕ್ರಮ ಎಸಗಿದ್ದಾರೆ ಎಂಬುದು ಜಾರಿ ನಿರ್ದೇಶನಾಲಯದ ಆರೋಪವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos