ಲಾರಿಗೆ ಕಾರು ಡಿಕ್ಕಿ: ಇಬ್ಬರು ಸಾವು

ಲಾರಿಗೆ ಕಾರು ಡಿಕ್ಕಿ: ಇಬ್ಬರು ಸಾವು

ಚಿತ್ರದುರ್ಗ, ನ. 24 : ಹಿರಿಯೂರು ತಾಲೂಕು ಆದಿವಾಲ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೊಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಾರು ಚಾಲಕ ಬೆಂಗಳೂರು ಮೂಲದ ಆಲಮ್ (30) ಹಾಗೂ ಕರೀಂ (32) ಮೃತರು.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos