ಇಂದು ಲಾರಿ ಮಾಲೀಕರ ಮುಷ್ಕರ!

ಇಂದು ಲಾರಿ ಮಾಲೀಕರ ಮುಷ್ಕರ!

ಬೆಂಗಳೂರು: ಇಂದು ಲಾರಿ ನಿರ್ದಿಷ್ಟ ಅವಧಿ ಮುಷ್ಕರ ನಡೆಸಲಾಗುವುದು ಎಂದು ಲಾರಿ ಮಾಲೀಕ ಸಂಘ ತಿಳಿಸಿದ್ದಾರೆ. 10 ವರ್ಷ ಜೈಲು ಹಾಗೂ 7 ಲಕ್ಷ ರು ದಂಡ ವಿಧಿಸುವ ಕೇಂದ್ರ ಸರ್ಕಾರದ ಕಾನೂನು ವಿರೋಧಿಸಿ ಲಾರಿ ಮಾಲೀಕ ಸಂಘ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ.ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮುಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅ್ಯಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ.

ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ, ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾದ ಹಿನ್ನೆಲೆ, ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಅತ್ಯಗತ್ಯ ಸೇವೆಗಳನ್ನ ಹೊರತುಪಡಿಸಿ ಕೆಲ ಸೇವೆಗಳು ವಿಳಂಭವಾಗುವ ಸಾಧ್ಯತೆ ಇದೆ.

 

ಫ್ರೆಶ್ ನ್ಯೂಸ್

Latest Posts

Featured Videos