ಸಪೋಟಾ ಸೇವನೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು

ಸಪೋಟಾ ಸೇವನೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ತುಂಬಾ ಕಷ್ಟಕರವಾಗಿದೆ. ನಮಗೆ ದಿನನಿತ್ಯ ಸಿಗುವಂತ ಹಣ್ಣುಗಳನ್ನು ಸರಿಯಾಗಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಾಗಲಿ ಗಂಡು ಮಕ್ಕಳಾಗಿ ತೂಕ ಇಳಿಸುವ ಬಗ್ಗೆ ಬಹಳಷ್ಟು ಕ್ರಮಗಳನ್ನು ವಹಿಸುತ್ತಾರೆ. ಈ ಹಣ್ಣನ್ನು ಸೇವನೆಯಿಂದ ನಮ್ಮ ತೂಕವನ್ನು ನಾವು ಇಳಿಸಿಕೊಳ್ಳಬಹುದಾಗಿದೆ.

ಮಾರುಕಟ್ಟೆಯಲ್ಲಿ ಸಪೋಟಾ ಹಣ್ಣು ಕಡಿಮೆ ಬೆಲೆಗೆ ಸಿಗುತ್ತದೆ. ಈ ಹಣ್ಣಿನ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಸಪೋಟಾ ಹಣ್ಣನ್ನು ನಮ್ಮ ಆಹಾರದಲ್ಲಿ ಸೇವಿಸುವುದರಿಂದ ನಾವು ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. ಇದು ಅನೇಕ ಪೋಷಕಾಂಶಗಳನ್ನು ಹೊಂದಿದೆ. ಚಿಕ್ಕೂ ಹಣ್ಣು ಎಂದು ಸಹ ಇದನ್ನು ಕರೆಯುತ್ತಾರೆ.

ಸಪೋಟಾ ಹಣ್ಣಿನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಈ ಹಣ್ಣು ಚಯಾಪಚಯವನ್ನು ಸುಧಾರಿಸುತ್ತದೆ. ಸಪೋಟಾ ಹಣ್ಣಿನಲ್ಲಿ ವಿಟಮಿನ್ ಎ, ಸಿ, ಪೊಟಾಸಿಯಂ ಮತ್ತು ಫೋಲೇಟ್ ಇದೆ. ಇವುಗಳು ನಿಮ್ಮ ಹೊಟ್ಟೆಯ ಕೊಬ್ಬನ್ನು ಸುಲಭವಾಗಿ ಕಡಿಮೆ ಮಾಡುತ್ತದೆ. ಆಹಾರದಲ್ಲಿ ಸಪೋಟಾ ಸೇರಿಸುವುದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಸಪೋಟಾ ಹಣ್ಣನ್ನು ತಿನ್ನುವುದರಿಂದ ತೂಕ ಇಳಿಕೆಯಾಗುತ್ತದೆ. ಇದು ನಮ್ಮ ದೇಹದಲ್ಲಿರುವ ಹೆಚ್ಚುವರಿ ಕ್ಯಾಲೋರಿಗಳನ್ನು ಕರಗಿಸುತ್ತದೆ. ಇದಲ್ಲದೆ, ಸಪೋಟಾ ಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಇರುತ್ತದೆ. ತೂಕ ಹೆಚ್ಚಾಗುವ ಭಯವಿಲ್ಲ. ಸಪೋಟ ಹಣ್ಣನ್ನು ಆರಾಮವಾಗಿ ತಿನ್ನಬಹುದು. ಸಪೋಟ ಹಣ್ಣನ್ನು ತಿಂದರೆ ಶುಗರ್‌ ಹೆಚ್ಚಾಗುವ ಚಿಂತೆಯಿಲ್ಲ. ಇದರಲ್ಲಿರುವ ವಿಟಮಿನ್‌ಗಳು ನಮ್ಮ ದೇಹವನ್ನು ಆರೋಗ್ಯಕರವಾಗಿರಿಸಲು ಸಹಾಯ ಮಾಡುತ್ತದೆ. ಈ ಸಪೋಟಾ ಹಣ್ಣು ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗುವುದನ್ನು ತಡೆಯುತ್ತದೆ.

ಸಪೋಟಾ ಹಣ್ಣಿನಲ್ಲಿ ನಾರಿನಂಶ ಹೇರಳವಾಗಿದೆ. ಇದರಿಂದ ಮಲಬದ್ಧತೆ ಸಮಸ್ಯೆಗೆ ಪರಿಹಾರ ಸಿಗುವುದು. ಸಪೋಟಾ ಸೇವಿಸಿದರೆ ಹೆಚ್ಚು ಹೊತ್ತು ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಫೈಬರ್ ಹೊಂದಿರುವ ಆಹಾರವು ತೂಕವನ್ನು ಹೆಚ್ಚಿಸುವುದಿಲ್ಲ. ಇದು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಸಪೋಟಾ ಹಣ್ಣನ್ನು ನಮ್ಮ ಆಹಾರದಲ್ಲಿ ಸೇರಿಸುವುದರಿಂದ ಕರುಳಿನ ಆರೋಗ್ಯವನ್ನು ಸುಧಾರಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos