ಬೆಂಗಳೂರು, ನ. 25 : ಸಮ್ಮಿಶ್ರ ಸರ್ಕಾರ ಪತನದ ನಂತರ ಅನರ್ಹ ಶಾಸಕರೊಂದಿಗೆ ಸೇರಿ ಬಿಜೆಪಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಾನೊಂದು ತೀರ, ನೀನೊಂದು ತೀರ ಎನ್ನುವಂತಿದ್ದ ಪಕ್ಷದ ನಾಯಕರು ಉಪ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿರುವುದು ಕಾರ್ಯಕರ್ತರಲ್ಲಿ ರಣೋತ್ಸಾಹ ತಂದಿದೆ.
ಅದರಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ನಡುವೆ ಸಾಕಷ್ಟು ಗೊಂದಲಗಳು ಮೂಡಿದ್ದವು. ಇದು ಉಪಚುನಾವಣೆಯಲ್ಲಿ ಫಲಿತಾಂಶದ ಮೇಲೆ ಭಾರೀ ಪರಿಣಾಮ ಬೀರಬಹುದು ಎಂದು ಊಹಿಸಲಾಗಿತ್ತು. ಕಾಂಗ್ರೆಸ್-ಜೆಡಿಎಸ್ನಿಂದ ಬಂದವರಿಗೆ ಟಿಕೆಟ್ ನೀಡು ವುದು ಪಕ್ಷದಲ್ಲಿ ಪದಾಧಿಕಾರಿಗಳ ನೇಮಕಾತಿ, ಸರ್ಕಾರದ ಆಯಾಕಟ್ಟಿನಲ್ಲಿ ಸ್ಥಳದಲ್ಲಿ ನೇಮಕಾತಿ ಸೇರಿದಂತೆ ಮುಖ್ಯಮಂತ್ರಿ ಹಾಗೂ ಪಕ್ಷದ ನಡುವೆ ದೊಡ್ಡ ಕಂದಕ ಸೃಷ್ಟಿಯಾಗಿತ್ತು.