ಕಮಲಕ್ಕೆ ಮುಖಭಂಗ : ವಿ.ಎಸ್.ಉಗ್ರಪ್ಪ

ಕಮಲಕ್ಕೆ ಮುಖಭಂಗ : ವಿ.ಎಸ್.ಉಗ್ರಪ್ಪ

ಬೆಂಗಳೂರು, ಡಿ. 2 : ಮಹಾರಾಷ್ಟ್ರದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದಂತೆ ಕರ್ನಾಟಕದಲ್ಲಿಯೂ ತೀವ್ರ ಮುಖಭಂಗ ಅನುಭವಿಸಲಿದೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಭವಿಷ್ಯ ನುಡಿದಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದ್ದು ಅನರ್ಹರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಲೆ ಎದ್ದಿದೆ. ಡಿ. 9 ರ ಬಳಿಕ ರಾಜ್ಯದ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ಹದಿನೈದು ಕ್ಷೇತ್ರಗಳಲ್ಲಿ ಗೆದ್ದೇ ಬಿಟ್ಟಿದ್ದೇವೆ ಎಂದು ಯಡಿಯೂರಪ್ಪ ತಿರುಕನ ಕನಸು ಕಾಣುತ್ತಿದ್ದಾರೆ.
ಅನರ್ಹರ ತ್ಯಾಗದಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಅನರ್ಹರ ಹಿತಕಾಪಾಡಿ ಅವರನ್ನು ಸಚಿವರನ್ನಾಗಿಸುತ್ತೇವೆ ಎಂದು ಅವರು ನೀತಿ ಸಂಹಿತೆ ಉಲ್ಲಂಘಿಸಿ ಪದೇಪದೇ ಹೇಳಿಕೆ ನೀಡುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos