ಭಾರತದಲ್ಲಿ ನಗರ ಪ್ರದೇಶಗಳಲ್ಲಿ ಬಹುತೇಕ ಮನೆಗಳಲ್ಲಿ ಎಲ್ಪಿಜಿ ಸಿಲಿಂಡರ್ ಬಳಕೆ ಆಗುತ್ತದೆ. ರಾಜ್ಯಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಮನೆಗಳು ಅಡುಗೆಗೆ ಎಲ್ಪಿಜಿ ಬಳಸುವುದುಂಟು. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಕೆಲಸಗಳನ್ನು ಅತಿ ಸುಲಭ ವಿಧಾನವಾಗಿ ಮಾಡಿಕೊಂಡಿದ್ದಾರೆ. ಆದರೆ ಹಿಂದಿನ ಕಾಲದಲ್ಲಿ ಅಡುಗೆ ಮಾಡಲು ಸೌದೆ ಒಲೆಯನ್ನು ಬಳಸುತ್ತಿದ್ದರು ಆದರೆ ಈಗ ಎಲ್ಪಿಜಿ ಸಿಲಿಂಡರ್ ನನ್ನು ಬಳಸುತ್ತಾರೆ. ಇದರಿಂದ ನಮ್ಮ ಸಮಯವೂ ಸಹ ಉಳಿಯುತ್ತದೆ ಹಾಗೂ ವಾಯು ಮಾಲಿನ್ಯವೂ ಕಡಿಮೆಯಾಗಿದೆ.
ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು 200 ರೂ ನಷ್ಟು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಸದ್ಯ 14 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಇದ್ದು, ಇದು 900 ರೂಗೆ ಇಳಿಕೆಯಾಗುವ ಸಾಧ್ಯತೆ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ. ಗ್ಯಾಸ್ ಬೆಲೆ ಕಡಿಮೆ ಆಗಿರುವ ಬಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಆಗಸ್ಟ್ 30 ಅಥವಾ 31ರಂದು ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಘೋಷಿಸಬಹುದು. ಎಲ್ಪಿಜಿ ಸಿಲಿಂಡರ್ಗಳ ಬೆಲೆ 200 ರೂನಷ್ಟು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.