ನಟಿ ಮಾನ್ವಿತಾ ಹಸೆಮಣೆ ಏರಲು ಸಜ್ಜು

ನಟಿ ಮಾನ್ವಿತಾ ಹಸೆಮಣೆ ಏರಲು ಸಜ್ಜು

ಬೆಂಗಳೂರು: ಕೆಂಡಸಂಪಿಗೆ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸಸ್ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್. ಆರ್ ಜೆಯಾಗಿದ್ದ ಮಾನ್ವಿತಾ ಸುಕ್ಕ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಬಲಗಾಲಿಟ್ಟರು. ಬಳಿಕ ಶಿವಣ್ಣನ ಟಗರು ಸಿನಿಮಾದಲ್ಲಿ ಬಣ್ಣ ಹಚ್ಚಿ ಟಗರು ಪುಟ್ಟಿಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದ ಈ ಸುಂದರಿ ಈಗ ಹಸೆಮಣೆ ಏರಲು ರೆಡಿಯಾಗಿದ್ದಾರೆ.

ಟಗರು ಪುಟ್ಟಿ ನಟಿ ಮಾನ್ವಿತಾ ಕಾಮತ್ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ ಜೊತೆ ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos