ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಧು ಬಂಗಾರಪ್ಪ

ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಧು ಬಂಗಾರಪ್ಪ

ಬೆಂಗಳೂರು: ಲೋಕಸಭಾ ಚುನಾವನೆ ಇನ್ನೆನು ಕೆಲವೇ ದಿನಗಳು ಭಾಕಿ ಇದ್ದು ಎಲ್ಲಾ ಪಕ್ಷಗಳು ತಮ್ಮದೆ ಕಾರ್ಯತಂತ್ರಗಳನ್ನು ರೂಪಿಸಿ ಲೋಕ ಸಮರಕ್ಕೆ ಸಜ್ಜಾಗುತ್ತಿವೆ. ನಿನ್ನೆ ಕಾಂಗ್ರೆಸ್‌ ನ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕುತೂಹಲ ಕೆರಳಿಸಿದೆ ಹೌದಯ, ಶಿವಮೊಗ್ಗದಲ್ಲಿ ಈ ಭಾರಿ ಕಾಂಗ್ರೆಸ್‌ ನಿಂದ ಕಣಕ್ಕೆ ಇಳಿಯತ್ತಿರುವುದು ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಇದರ ಬಗ್ಗೆ ಮಾತನಾಡಿರುವ ಸಚಿವ ಮಧು ಬಂಗಾರಪ್ಪ,    ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ, ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯವರಿಗೂ ಗೆಲುವು ಸುಲಭವಲ್ಲ ಎಂಬುದನ್ನು ಮರೆಯಬಾರದು ಎಂದರು.

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ. ಗೀತಾ ಶಿವರಾಜ್‍ಕುಮಾರ್ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿಯಾಗಿ, ಸ್ಟಾರ್ ನಟ ಶಿವರಾಜ್‍ಕುಮಾರ್ ಅವರ ಪತ್ನಿಯಾಗಿ, ನನ್ನ ಅಕ್ಕನಾಗಿ ಕಣಕ್ಕಿಳಿಯುತ್ತಿದ್ದಾರೆ.

ನಾವು ಅನ್ಯ ಪಕ್ಷದಂತೆ ಬೇರೆಯವರ ಹೆಸರಿನಲ್ಲಿ ಮತ ಕೇಳುವುದಿಲ್ಲ. ನಾವು ನಮ್ಮದೇ ಹೆಸರಿನಲ್ಲಿ ಚುನಾವಣೆ ನಡೆಸುತ್ತೇವೆ. ನಮ್ಮ ಸರ್ಕಾರದ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಬಿಜೆಪಿಯವರು ಚುನಾವಣೆಗೋಸ್ಕರ ಗ್ಯಾರಂಟಿ ಹೇಳುತ್ತಿದ್ದಾರೆ. ನಾವು ಜನರಿಗಾಗಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಹೀಗಾಗಿ ಮತದಾರರು ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ಇದೆ. ತಾಯಂದಿರೇ ಅಸ್ತಿತ್ವಕ್ಕೆ ತಂದಿರುವ ನಮ್ಮ ಸರ್ಕಾರಕ್ಕೆ ಅವರಿಂದಲೇ ಬೆಂಬಲ ಸಿಗುತ್ತದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos