ವಿದ್ಯಾರ್ಥಿನಿ ಮಧು ಕೊಲೆ ಪ್ರಕರಣ: ಆರೋಪಿ ಸುದರ್ಶನ್ ಯಾದವ್ ಸಿಐಡಿ ಕಸ್ಟಡಿಗೆ

ವಿದ್ಯಾರ್ಥಿನಿ ಮಧು ಕೊಲೆ ಪ್ರಕರಣ: ಆರೋಪಿ ಸುದರ್ಶನ್ ಯಾದವ್ ಸಿಐಡಿ ಕಸ್ಟಡಿಗೆ

ರಾಯಚೂರು, ಏ. 27, ನ್ಯೂಸ್ ಎಕ್ಸ್ ಪ್ರೆಸ್:   ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧ ಆರೋಪಿ ಈವರೆಗೂ ಸಿಐಡಿ ಕಸ್ಟಡಿಯಲ್ಲಿದ್ದ. ಆದರೆ, ಇಂದು ಸಿಐಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧ ಇಂದು ಆರೋಪಿಯನ್ನು ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿ ಈವರೆಗೂ ಸಿಐಡಿ ಪೊಲೀಸರ ಕಸ್ಟಡಿಯಲ್ಲಿದ್ದ. ಆದರೆ, ಇಂದು ಸಿಐಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಆರೋಪಿಯನ್ನು ಇನ್ನೂ ಐದು ದಿನ ತಮ್ಮ ವಶಕ್ಕೆ ನೀಡಬೇಕೆಂದು 3ನೇ ಜೆಎಂಎಫ್​ಸಿ ನ್ಯಾಯಾಧೀಶರಿಗೆ ಸಿಐಡಿ ಪೊಲೀಸರು ಮನವಿ‌ ಮಾಡಿಕೊಂಡಿದ್ದಾರೆ. ಸದರಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಇನ್ನೂ ಐದು ದಿನ ಸಿಐಡಿ ಕಸ್ಟಡಿಗೆ ವಹಿಸಿ ಆದೇಶಿಸಿದ್ದಾರೆ. ಮೇ 2ರವರೆಗೂ ಆರೋಪಿ ಸಿಐಡಿ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಲಿದ್ದಾನೆ.

ಫ್ರೆಶ್ ನ್ಯೂಸ್

Latest Posts

Featured Videos