ದಸರಾದಲ್ಲಿ ‘ಮಹಾರಾಷ್ಟ್ರ ಸಿಎಂ ಪತ್ನಿ ಸಂಗೀತ’

ದಸರಾದಲ್ಲಿ ‘ಮಹಾರಾಷ್ಟ್ರ ಸಿಎಂ ಪತ್ನಿ ಸಂಗೀತ’

ಮೈಸೂರು, ಸೆ. 13: ಅರಮನೆಗಳ ನಗರಿ ಎಂದೇ ಪ್ರಸಿದ್ಧವಾಗಿರುವ ಮೈಸೂರಿನಲ್ಲಿ ಅಂಬಾವಿಲಾಸ ಅರಮನೆ ಸೂಜಿಗಲ್ಲಿನಂತೆ ಸೆಳೆಯುತ್ತದೆ. ಹೌದು,   ಈ ಬಾರಿಯ ನಡೆಯಲಿರುವ ದಸರಾದಲ್ಲಿ ಮಹಾರಾಷ್ಟ್ರ ಸಿಎಂ ಪತ್ನಿ ಗಾಯಕಿ ಅಮೃತಾ ಫಡ್ನವೀಸ್ಗಾ ಯನವನ್ನು ಹಾಡಲಿದ್ದಾರೆ ಎನ್ನಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರಿಗೆ ಕರೆ ಮಾಡಿರುವ ಅಮೃತಾ ಫಡ್ನವೀಸ್ ‘ಈ ಬಾರಿಯ ದಸರಾ ಉತ್ಸವದಲ್ಲಿ ಹಾಡಲು ಅವಕಾಶ ಮಾಡಿಕೊಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಹೀಗಾಗಿ ಅವರ ಮನವಿಗೆ ಒಕೆ ಆಂತ ಸಚಿವರ ಹೇಳಿದ್ದಾರೆ ಅಂತ ತಿಳಿದು ಬಂದಿದೆ.

ಇನ್ನು ಅಮೃತಾ ಫಡ್ನವೀಸ್ ದಸರಾ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮ ನೀಡಲು ಉತ್ಸಾಹ ತೋರಿರುವುದು ಸಂತಸ ಹಾಗೂ ಹೆಮ್ಮೆಯ ಸಂಗತಿಯಾಗಿದ್ದು, ಈ ಬಗ್ಗೆ ಅವರ ಬಳಿಯಿಂದ ಇನ್ನೇರಡು ದಿವಸದಲ್ಲಿ ಅಧಿಕೃತವಾಗಿ ಮಾಹಿತಿ ಪಡೆದುಕೊಂಡು ಮುಂದಿನ ಕೆಲಸಗಳನ್ನು ಮಾಡಲಾಗುವುದು ಎಂದು ಸಚಿವ ಸೋಮಣ್ಣನವರು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos