ಮಹಾರಾಷ್ಟ್ರ ಅಂತಿಮ ತೀರ್ಪು ನಾಳೆ

ಮಹಾರಾಷ್ಟ್ರ ಅಂತಿಮ ತೀರ್ಪು ನಾಳೆ

ನವದೆಹಲಿ, ನ. 24 : ಶೀಘ್ರ ಬಹುಮತ ಸಾಬೀತಿಗೆ ಆದೇಶಿಸಿ ಎಂದು ಶಿವಸೇನೆ ಮತ್ತು ಕಾಂಗ್ರೆಸ್-ಎನ್ಸಿಪಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದವು. ದಿಢೀರ್ ರಾಷ್ಟ್ರಪತಿ ಆಡಳಿತ ತೆರವುಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟ ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಮೂರು ಪಕ್ಷಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು. ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಕೀಲರ ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ಅಂತಿಮ ತೀರ್ಪು ನಾಳೆಗೆ ಮುಂದೂಡಿದೆ. ಅಲ್ಲದೇ ರಾಜ್ಯಾಪಲರು ದೇವೇಂದ್ರ ಫಡ್ನವೀಸ್ಗೆ ಸಿಎಂ ಆಗುವುದಕ್ಕೆ ಅವಕಾಶ ಮಾಡಿಕೊಟ್ಟ ನಿರ್ಧಾರ ಪರಿಶೀಲಿಸಲಿದೆ. ಹಾಗೆಯೇ ಈ ಸಂಬಂಧ ದೇವೇಂದ್ರ ಫಡ್ನವೀಸ್ ಹಾಗೂ ಎನ್ಸಿಪಿ ಅಜಿತ್ ಪವಾರ್ ಪ್ರತಿಕ್ರಿಯೆ ನೀಡಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ರಾಷ್ಟ್ರಪತಿ ಆದೇಶ ಹಿಂಪಡೆದ ಪ್ರತಿ ಸೇರಿದಂತೆ ಸಿಎಂ ಪ್ರಮಾಣ ವಚನ ಸಹಿತ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಗವರ್ನರ್ಗೆ ಆದೇಶಿಸಿದೆ. ಇದರಿಂದ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ತಾತ್ಕಲಿಕ ರಿಲೀಫ್ ಸಿಕ್ಕಂತಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos