ನಾಳೆ ಮಹಾರಾಷ್ಟ್ರ-ಹರಿಯಾಣ ಎಲೆಕ್ಷನ್, ಭಾರೀ ಬಂದೋಬಸ್ತ್..!

ನಾಳೆ ಮಹಾರಾಷ್ಟ್ರ-ಹರಿಯಾಣ  ಎಲೆಕ್ಷನ್, ಭಾರೀ ಬಂದೋಬಸ್ತ್..!

ಮುಂಬೈ,ಚಂಡಿಗಢ, ಅ.20 : ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ಹೈವೋಲ್ಟೇಜ್ ವಿಧಾನಸಭಾ ಚುನಾವಣೆ ನಾಳೆ ನಡೆಯಲಿದೆ. ವ್ಯಾಪಕ ಬಂದೋಬಸ್ತ್ ನಡುವೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.
ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಎರಡು ರಾಜ್ಯದಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ಚುನಾವಣೆಯ ಬಹಿರಂಗ ಪ್ರಚಾರ ನಿನ್ನೆ ಸಂಜೆ ಅಂತ್ಯಗೊಂಡಿದೆ. ಮತದಾರರನ್ನು ಓಲೈಸಲು ಪ್ರಮುಖ ರಾಜಕೀಯ ಪಕ್ಷಗಳ ಘಟನುಘಟಿಗಳು ಕೊನೆ ಕ್ಷಣದವರೆಗೂ ಬಿರುಸಿನ ಪ್ರಚಾರ ನಡೆಸಿದರು. ಮಹಾರಾಷ್ಟ್ರದ 288 ಮತ್ತು ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಇದೇ ವೇಳೆ 17 ರಾಜ್ಯಗಳ ಎರಡು ಲೋಕಸಭಾ ಕ್ಷೇತ್ರಗಳು ಮತ್ತು 51 ವಿಧಾನಸಭಾ ಕ್ಷೇತ್ರಗಳಿಗೂ ಮತದಾನವಾಗಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಒಟ್ಟು 3,237 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos