ಮೈತ್ರಿಗೆ ಅಗ್ನೀ ಪರೀಕ್ಷೆ

ಮೈತ್ರಿಗೆ ಅಗ್ನೀ ಪರೀಕ್ಷೆ

ಬೆಂಗಳೂರು, ಜು. 15 : ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದ ಕಲಾಪ ಸಮಿತಿ ಸಭೆಯಲ್ಲಿ, ಇಂದೇ ವಿಶ್ವಾಸಮತ ಯಾಚಿಸಲು ಸೂಚನೆ ನೀಡುವಂತೆ ಬಿಜೆಪಿ ಪಟ್ಟು ಹಿಡಿದಿತ್ತು. ಅತೃಪ್ತ ಶಾಸಕರ ರಾಜೀನಾಮೆ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಮಂಗಳವಾರ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ 11ಗಂಟೆಗೆ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ಸ್ಪೀಕರ್ ಸ್ಪಷ್ಟಪಡಿಸಿದ್ದರು.
ಈ ತೀರ್ಮಾನಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಪ್ಪಿಗೆ ಸೂಚಿಸಿರುವುದಾಗಿ ಸಭೆಯ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos