‘ನಿಖಿಲ್‍’ ರಿಂದ ‘ಚಾಮುಂಡೇಶ್ವರಿ’ಗೆ ವಿಶೇಷ ಪೂಜೆ..!

‘ನಿಖಿಲ್‍’ ರಿಂದ  ‘ಚಾಮುಂಡೇಶ್ವರಿ’ಗೆ ವಿಶೇಷ ಪೂಜೆ..!

ಮೈಸೂರು, ಮೇ. 23, ನ್ಯೂಸ್ಎಕ್ಸ್ ಪ್ರೆಸ್‍: ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮೊದಲು ಇಂದು ಬೆಳಿಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ  ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ನಾಡ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಆರ್ಶೀವಾದ ಪಡೆದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ, ಸಚಿವರಾದ ಸಿ.ಎಸ್. ಪುಟ್ಟರಾಜು ಪುತ್ರ ಶಿವರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಪುತ್ರ ಸಂತೋಷ್ ಭಾಗಿಯಾಗಿದ್ದರು

ಫ್ರೆಶ್ ನ್ಯೂಸ್

Latest Posts

Featured Videos