ಬೆಂಗಳೂರು, ಜ.3 : 15 ತಿಂಗಳ ಬಾಕಿ ಪ್ರೋತ್ಸಾಹಧನವನ್ನು ಒಂದೇ ಬಾರಿ ಪಾವತಿ ಮಾಡಬೇಕೆಂಬುದು ಕೂಡ ಆಶಾ ಕಾರ್ಯಕರ್ತರ ಬೇಡಿಕೆಯಲ್ಲೊಂದು. ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ನೇತೃತ್ವದಲ್ಲಿ ಇಂದು ಬಹೃತ್ ಪ್ರತಿಭಟನೆ ನಡೆಯಲಿದೆ.
ಮಾಸಿಕ ಗೌರವಧನ 12 ಸಾವಿರ ರೂ. ನಿಗದಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ನಡೆಯುತ್ತಿದೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ ಬೃಹತ್ ಜಾಥಾ ನಡೆಯಲಿದೆ.
ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ ಹಲವು ಜಿಲ್ಲೆಗಳಿಂದ ಆಶಾ ಕಾರ್ಯಕರ್ತೆಯರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಭದ್ರತೆಗಾಗಿ ಸುಮಾರು 300 ಪೊಲೀಸರ ನಿಯೋಜನೆ ಮಾಡಲಾಗಿದೆ. 5 ಕೆಎಸ್ಆರ್ಪಿ ತುಕಡಿ, 3 ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರತಿಭಟನಾಕಾರರ ಸಂಖ್ಯೆಯನ್ನು ಗಮನಿಸಿ ನಂತರ ಭದ್ರತೆ ಹೆಚ್ಚಳ ಮಾಡಲಾಗುತ್ತದೆ.