ಮಾಜಿ ಶಾಸಕ ಎಂ.ಸತ್ಯನಾರಾಯಣ ನಿಧನ

ಮಾಜಿ ಶಾಸಕ ಎಂ.ಸತ್ಯನಾರಾಯಣ ನಿಧನ

ಮೈಸೂರು  , ಜೂನ್.7, ನ್ಯೂಸ್ ಎಕ್ಸ್ ಪ್ರೆಸ್ : ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ (74) ಅವರು  ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇಲವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾತ್ರಿ 11.10 ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. 2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 2013ರಲ್ಲಿ ಜಿ.ಟಿ.ದೇವೇಗೌಡ ಅವರ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು.  ಸತ್ಯನಾರಾಯಣ ಅವರು ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಸಜ್ಜನ ರಾಜಕಾರಣಿ ಎಂದು ಹೆಸರುಗಳಿಸಿದ್ದರು. ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos