ಚಿಕ್ಕೋಡಿನ ಜಿಲ್ಲೆ ಮಾಡಿ ಇಲ್ಲ ಕೈಗೆ ಬಳೆ ತೊಟ್ಟುಕೊಳ್ಳಿ

ಚಿಕ್ಕೋಡಿನ ಜಿಲ್ಲೆ ಮಾಡಿ ಇಲ್ಲ ಕೈಗೆ ಬಳೆ ತೊಟ್ಟುಕೊಳ್ಳಿ

ಚಿಕ್ಕೋಡಿ, ಫೆ. 18:  ಚಿಕ್ಕೋಡಿಯನ್ನು ಜಿಲ್ಲೆ ಮಾಡಿ ಇಲ್ಲ ಕೈಗೆ ಬಳೆ ತೊಟ್ಟುಕೊಳ್ಳಿ’ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಅವರು ಚಿಕ್ಕೋಡಿ ಭಾಗದ ರಾಜಕಾರಣಿಗಳಿಗೆ ಸವಾಲೆಸೆದಿದ್ದಾರೆ.

ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಭಾಗದ ರಾಜಕಾರಣಿಗಳ ವಿರುದ್ಧ ಕೆಂಡ ಕಾರಿದರು. ಸಂಸದನನ್ನಾಗಿ ಆಯ್ಕೆ ಮಾಡಿದರೆ  ಚಿಕ್ಕೋಡಿಯನ್ನು ಜಿಲ್ಲೆ ಮಾಡುವದಾಗಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಪ್ರಧಾನಿ ನರೇಂದ್ರ ಮೋದಿ ಇರುವ ವೇದಿಕೆಯಿಂದ ಲಕ್ಷಾಂತರ ಜನರ ಮುಂದೆ ವಚನ ನೀಡಿದ್ದರು. ಸಂಸದನಾಗಿ ಆಯ್ಕೆಯಾದ ಬಳಿಕ ಮಾತನಾಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

“ಈ (ಚಿಕ್ಕೋಡಿ) ಭಾಗದ ರಾಜಕಾರಣಿಗಳು ಈ ಕುರಿತಂತೆ ಅಧಿವೇಶನದಲ್ಲಿ ಧ್ವನಿ ಎತ್ತಬೇಕು. ಪ್ರತ್ಯೇಕ ಜಿಲ್ಲೆಗಾಗಿ ಒತ್ತಾಯಿಸಬೇಕು. ಇಲ್ಲದಿದ್ದರೆ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ದೆಹಲಿಯಲ್ಲಿ ‘ಆಮ್ ಆದ್ಮಿ ಪಾರ್ಟಿ’ ರೀತಿಯ ರಾಜಕೀಯ ಕ್ರಾಂತಿಗಾಗಿ ಪ್ರತಿ ಗ್ರಾಮ ಮಟ್ಟದಲ್ಲಿ ಹೋರಾಟ ರೂಪಿಸುವುದಾಗಿ ಸಂಗಪ್ಪಗೋಳ ಎಚ್ಚರಿಕೆ ನೀಡಿದರು.

ಈಗಾಗಲೇ ಕೆಲವು ಕಚೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಆದರೆ, ಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದು ಎರಡೇ ಕಚೇರಿ. ಇದರಿಂದ ಬೆಳಗಾವಿಗೆ ಮತ್ತೆ ಅನ್ಯಾಯ ಆಗಿದೆ. ಬೆಂಗಳೂರಿನ ಎಂಎಸ್ ಬಿಲ್ಡಿಂಗ್ ರೀತಿಯಲ್ಲಿ ಸುವರ್ಣ ವಿಧಾನ ಸೌಧದ ಪಕ್ಕದಲ್ಲಿ ಒಂದು ಕಟ್ಟಡ ನಿಮಾ೯ಣ ಮಾಡಿ, ಎಲ್ಲ ಇಲಾಖೆಗಳ ರಾಜ್ಯ ಮಟ್ಟದ ಒಂದು ಕಚೇರಿಯನ್ನು ಅಲ್ಲಿಗೆ ಸ್ಥಳಾಂತರಿಸಬೇಕು, ಎಂದು ಅವರು ಒತ್ತಾಯಿಸಿದರು.

ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವರಾಗಿರುವ ಜಗದೀಶ ಶೆಟ್ಟರ್ ಅವರು ಬಂಡವಾಳ ಹೂಡಿಕೆ ಸಮಾವೇಶವನ್ನು ತವರು ಜಿಲ್ಲೆಗೆ ತೆಗೆದುಕೊಂಡು ಹೋಗಿ, ಆ ಜಿಲ್ಲೆಗೆ 50 ಸಾವಿರ ಕೋಟಿ ಬಂಡವಾಳ ದೊರೆಯುವಂತೆ ನೋಡಿಕೊಂಡಿದ್ದಾರೆ. ಆ ಮೂಲಕ ಬೆಳಗಾವಿಗೆ ಅನ್ಯಾಯ ಮಾಡಿದ್ದಾರೆ. ಜಿಲ್ಲೆಯ ರಾಜಕಾರಣಿಗಳಲ್ಲಿ ಧೈರ್ಯ, ತಾಕತ್ತು ಇದ್ದರೆ ಅದನ್ನು ಪ್ರದರ್ಶಿಸುವ ಮೂಲಕ ಜಿಲ್ಲೆಗೆ ನ್ಯಾಯ ಒದಗಿಸಿಕೊಡಬೇಕು ಎಂದು ಕೆಣಕಿದರು.

ಪತ್ರಿಕಾಗೋಷ್ಠಿಯಲ್ಲಿ ಸುರೇಶ ಬ್ಯಾಕೂಡೆ, ತುಕಾರಾಮ ಕೋಳಿ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos