ಶಿಕ್ಷಕರ ಸೇವೆ ಮಾಡಲು ಅವಕಾಶ ಕಲ್ಪಿಸಿ

ಶಿಕ್ಷಕರ ಸೇವೆ ಮಾಡಲು ಅವಕಾಶ ಕಲ್ಪಿಸಿ

ಕೋಲಾರ: ಪ್ರಾಥಮಿಕ ಶಾಲಾ ಶಿಕ್ಷಕರ ಚುನಾವಣೆ ಡಿಸೆಂಬರ್ ೬ ರಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ನೀಡುವ ಮೂಲಕ ಶಿಕ್ಷಕರ ಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಮನವಿ ಮಾಡಿದರು.
ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆದ ತಾಲೂಕು ಶಿಕ್ಷಕರ ಸಭೆಯಲ್ಲಿ ಮಾತನಾಡಿ, ಈಗಾಗಲೇ ಕಳೆದ ಐದು ವರ್ಷಗಳಲ್ಲಿ ಶಿಕ್ಷಕರ ಅನೇಕ ಕುಂದುಕೊರತೆಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಲ್ಲಿ ಶಿಕ್ಷಕರ ಸಂಘದ ಸೇವೆ ಅಪಾರವಾಗಿದೆ. ಕಾಲಕಾಲಕ್ಕೆ ಶಿಕ್ಷಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಈಡೇರಿಸುವಲ್ಲಿ ಸಂಘವು ಬಹುಮುಖ್ಯ ಪಾತ್ರ ವಹಿಸುತ್ತಿದೆ ಎಂದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಉಪಾಧ್ಯಕ್ಷ ಹೆಚ್.ಎಂ ಕೃಷ್ಣಪ್ಪ, ಶಿಕ್ಷಕರ ಮುಖ್ಯ ಬೇಡಿಕೆಗಳಿಗೆ ಆಗಲೇ ಪರಿಹಾರವನ್ನು ಸಂಘದ ವತಿಯಿಂದ ನೀಡಿದ್ದು ಇನ್ನು ಉಳಿದ ಕೆಲವೇ ಬೇಡಿಕೆಗಳಿಗಾಗಿ ಅವಿರತ ಹೋರಾಟ ಮಾಡಬೇಕಾಗಿದೆ. ಆದ್ದರಿಂದ ಅನಿಲ್ ಕುಮಾರ್ ಬಣಕ್ಕೆ ಮತ ನೀಡುವಂತೆ ಅವರು ಮನವಿ ಮಾಡಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos