ಮಾಳಮ್ಮ ತಾಪಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮಾಳಮ್ಮ ತಾಪಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಪಾವಗಡ:ಸೊಗಡು ವೆಂಕಟೇಶ್ ರಾಜೀನಾಮೆಯಿಂದ ತೆರವಾಗಿದ್ದ ತಾ.ಪಂ.ಅದ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿದ್ದು, ಪಳವಳ್ಳಿ ಕ್ಷೇತ್ರದ ತಾ.ಪಂ.ಸದಸ್ಯೆ ಮಾಳಮ್ಮ ಸುಬ್ಬರಾಯಪ್ಪ ತಾ.ಪಂ.ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಧುಗಿರಿ ಉಪವಿಭಾಗಾಧಿಕಾರಿ ಡಾ|| ನಂದಿನಿದೇವಿ ಚುನಾವಣಾಧಿಕಾರಿಯಾಗಿದ್ದರು. ಹಾಗೂ ತಹಶೀಲ್ದಾರ್ ಡಿ.ಎನ್.ವರದರಾಜು ಹಾಜರಿದ್ದರು.

ನೂತನ ಅಧ್ಯಕ್ಷಿಣಿ ಮಾಳಮ್ಮ ಸುಬ್ಬರಾಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ನನ್ನ ನಿರಂತರ ಸೇವೆಯನ್ನು ಗುರ್ತಿಸಿ ತಾ.ಪಂ.ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಶಾಸಕರಾದ ವೆಂಕಟರಮಣಪ್ಪ, ಮಾಜಿ ಶಾಸಕ ಸೋಮ್ಲಾನಾಯ್ಕ, ಪಕ್ಷದ ಮುಖಂಡರುಗಳಿಗೆ ಹಾಗೂ ತಾ.ಪಂ.ಸದಸ್ಯರಿಗೆ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos