ದೇಶದ ಪ್ರಗತಿಯಲ್ಲಿ ಮೋದಿ ಕೊಡುಗೆ ಏನು: ಮಲ್ಲಿಕಾರ್ಜುನ ಖರ್ಗೆ

ದೇಶದ ಪ್ರಗತಿಯಲ್ಲಿ ಮೋದಿ ಕೊಡುಗೆ ಏನು: ಮಲ್ಲಿಕಾರ್ಜುನ ಖರ್ಗೆ

ಚನ್ನಪಟ್ಟಣ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೇನು ಕೆಲವು ದಿನಗಳು ಬಾಕಿ ಉಳಿದಿದ್ದೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್‌ ಅವರು ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಾರಿ ಜಿದ್ದಾಜಿದಿಗೆ ಕಾರಣವಾಗಿದೆ.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಏಳಿಗೆಗೆ ಏನು ಕೊಡುಗೆ ನೀಡಿದೆ, ಹೆಣ್ಣುಮಕ್ಕಳ ಉದ್ಧಾರಕ್ಕೆ ಯಾವ ಯೋಜನೆ ರೂಪಿಸಿದೆ, ದೇಶದ ಪ್ರಗತಿಗೆ ಏನು ಮಾಡಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.

‘ಮೋದಿಯವರು ಹತ್ತು ವರ್ಷಗಳಿಂದ ಸತತವಾಗಿ ಪ್ರಧಾನಿಯಾಗಿದ್ದಾರೆ. ಆದರೆ, ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದಿದ್ದರು, ವಿದೇಶಿ ಬ್ಯಾಂಕ್ ಗಳಲ್ಲಿರುವ ಕಪ್ಪು ಹಣವನ್ನು ತಂದು ಬಡವರ ಖಾತೆಗೆ ₹ 15 ಲಕ್ಷ ಹಣ ಹಾಕುತ್ತೇನೆ ಎಂದಿದ್ದರು. ಇವನ್ನೆಲ್ಲಾ ಎಲ್ಲಿ ಮಾಡಿದ್ದಾರೆ. ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಾರೆ ಎಂದು ಮೋದಿ ಆರೋಪಿಸುತ್ತಾರೆ, ಸುಳ್ಳು ಹೇಳುತ್ತಿರುವುದು ಮೋದಿಯವರಾ, ಕಾಂಗ್ರೆಸ್‌ನವರಾ’ ಎಂದು ಹರಿಹಾಯ್ದರು.

ನಗರದ ಕೆ.ಎಚ್.ಬಿ. ಬಡಾವಣೆಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯು ದೇಶವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ. ಜಾತಿ ಜಾತಿಗಳ ನಡುವೆ, ಜನರ ಜನರ ನಡುವೆ ಜಗಳವನ್ನು ತಂದಿಕ್ಕುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.

‘ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಯಬೇಕಾದರೆ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕ್ಷೇತ್ರದ ಜನತೆ ಸುರೇಶ್ ಅವರನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos