ಹನುಮ ಧ್ಜಜ ವಿವಾದ: ಮಂಡ್ಯ ಬಂದ್, ಬಿಗಿ ಪೊಲೀಸ್ ಭದ್ರತೆ

ಹನುಮ ಧ್ಜಜ ವಿವಾದ: ಮಂಡ್ಯ ಬಂದ್, ಬಿಗಿ ಪೊಲೀಸ್ ಭದ್ರತೆ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆರಗೋಡು ಹಾಗೂ ಮಂಡ್ಯ ಬಂದ್ ಗೆ  ಶ್ರೀರಾಮಭಜನಾ ಮಂಡಳಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆಗಳು ಕರೆ ನೀಡಿವೆ.‌

ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಜನವರಿ 28ರಂದು ಅರ್ಜುನ ಧ್ವಜಸ್ತಂಭದ ಮೇಲೆ ಹಾರಿಸಿದ್ದ ಹನುಮ ಧ್ವಜವನ್ನ ಇಳಿಸಿ, ತ್ರಿವರ್ಣ ಧ್ವಜವನ್ನ ಜಿಲ್ಲಾಡಳಿತ ಹಾರಿಸಿತ್ತು. ಇದನ್ನ ವಿರೋಧಿಸಿ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬೃಹತ್ ಹೋರಾಟವನ್ನ ನಡೆಸುತ್ತಿದ್ದಾರೆ.

ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ದ್ವಜ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಉಂಟಾದ ವಿವಾದದ ಬಿಸಿ ಇನ್ನೂ ತಣ್ಣಗಾಗಿಲ್ಲ. ಹಿಂದೂ ಪರ ಸಂಘಟನೆಗಳು ಇಂದು ಮಂಡ್ಯ ಬಂದ್ ಗೆ ಕರೆ ನೀಡಿವೆ ಮತ್ತು ಅದರ ಪರಿಣಾಮವಾಗಿ ನಗರದ ಬಹುತೇಕ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ.

ಅಹಿತಕರ ಘಟನೆಗಳಿಗೆ ಆಸ್ಪದವಾಗದಿರಲು ನಗರದಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನೆಕಾರರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬಹುದಾದ ರೇಲ್ವೇ ನಿಲ್ದಾಣದ ಬಳಿಯಿರುವ ಆಂಜನೇಯ ಸ್ವಾಮಿ ದೇವಸ್ಥಾನ, ಮಹಾವೀರ ವೃತ್ತ, ಸಂಜಯ ಸರ್ಕಲ್ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮೊದಲಾದ ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಿಲಾಗಿದೆ.

ವಿವಿ ರೋಡ್, ಆರ್ ಪಿ ರೋಡ್, ಹೊಸಪೇಟೆ ಬೀದಿ ಮತ್ತು ಇನ್ನೂ ಕೆಲ ಕಡೆಗಳಲ್ಲಿ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ಬಂದ್ ಇಟ್ಟಿದ್ದಾರೆ. ವಿವಾದದ ಸ್ಥಳವಾಗಿರುವ ಕೆರಗೋಡುನ್ಲಲು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಇಲ್ಲೂ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos