ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ!

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ!

ಬೆಂಗಳೂರು: ಕಳೆದ ಹಲವು ದಿನಗಳಿಂದ ಭಾರಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಖಚಿತವಾಗಿದೆ.

ಕಗ್ಗಂಟಾಗಿದ್ದ ಮೈತ್ರಿಯ ಅಭ್ಯರ್ಥಿಗಳ ಎರಡು ಕ್ಷೇತ್ರಗಳನ್ನು ಕೊನೆಗೂ ಫೈನಲ್ ಮಾಡಿದ್ದು, ಜನರ ಒತ್ತಾಯದ ಮೇರೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ ಮಾಡಿದ್ದಾರೆ. ಆದರೆ ಅಧಿಕೃತ ಮಾಹಿತಿ ಹೊರಬೀಳಬೇಕಿರುವುದು ಮಾತ್ರ ಬಾಕಿ ಉಳಿದಿದೆ.

ಹಾಸನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನೀವೇ ನಿಲ್ಲಬೇಕು ಎಂದು ಜನತೆ ಹಠ ಮಾಡುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಲೋಕಸಭೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕುಮಾರಸ್ವಾಮಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಂದ ಕೂಡಲೇ ಮಂಡ್ಯಕ್ಕೆ ಬನ್ನಿ ಎಂದಿದ್ದಾರೆ. ಇವತ್ತು ಕೋರ್ ಕಮಿಟಿ ಸಭೆಯಲ್ಲೂ ನೀವೇ ನಿಲ್ಲಬೇಕು ಎಂದಿದ್ದಾರೆ. ಈ ಬಾರಿ ಆದರೂ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಗೆಲ್ಲಿಸಿಕೊಡಬೇಕು ಎಂದು ಹೆಚ್.ಡಿ ದೇವೇಗೌಡ ಮನವಿ ಮಾಡಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ತಮಗೆ ಸಹಕಾರ ನೀಡುವಂತೆ ಶೋಭಾ ಕರಂದ್ಲಾಜೆ ಅವರು ಹೆಚ್​ಡಿಕೆಗೆ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಉಪಮುಖ್ಯಮಂತ್ರಿ ಸಿ.ಎನ್ ಅಶ್ವತ್ಥ ನಾರಾಯಣ್, ದಾಸರಹಳ್ಳಿ ಶಾಸಕ ಮುನಿರಾಜು, ಯಶವಂತಪುರದ ಜೆಡಿಎಸ್ ಮುಖಂಡ ಟಿ.ಎನ್ ಜವರಾಯಿಗೌಡ, ನಿಖಿಲ್ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos