ಮಂಡ್ಯದ ಸ್ಪರ್ಧೆ ನಿಖಿಲ್ ಕುಮಾರಸ್ವಾಮಿ

ಮಂಡ್ಯದ ಸ್ಪರ್ಧೆ ನಿಖಿಲ್  ಕುಮಾರಸ್ವಾಮಿ

ಮಾ.4, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯದಲ್ಲಿ ಸ್ಪರ್ಧಿಸುವುದು ನಿಖಿಲ್ ಕುಮಾರಸ್ವಾಮಿ ಅವರು ಒಪ್ಪಿಕೊಂಡಿದಾರೆ, ಆದ್ರೆ ಸುಮಲತಾ ಅಂಬರೀಶ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ನಾನು ಎನು ಮಾತನಾಡಲ್ಲ ಎಂದು ಹೇಳಿದ್ದಾರೆ.

ಮದ್ದೂರಿನ ಬಳಿ ಬಸ್ ಉರುಳಿ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿಮ್ಸ್ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು, ರಾಷ್ಟ್ರಾಧ್ಯಕ್ಷರು ಸೇರಿದಂತೆ ಎಲ್ಲರು ಕುಳಿತು ತೀರ್ಮಾನ ಮಾಡಿದ್ದಾರೆ. ನನಗೆ ಟಿಕೆಟ್ ಕೊಡಲು ಪಕ್ಷ ತೀರ್ಮಾನ ಮಾಡಿದೆ. ನಾನು ನನ್ನ ಸೇವೆ ಮಾಡುತ್ತೇನೆ ಎಂದು ತಿಳಿಸಿದ್ರು.

ಇದೇ ವೇಳೆ ಮೈಸೂರಿನಿಂದ ಸ್ಪರ್ಧೆ ಮಾಡುತ್ತಾರೆ ಎಂದು ತಮ್ಮ ಬಗ್ಗೆ ಕೇಳಿ ಬಂದ ಊಹಾಪೋಹವನ್ನು ನಿಖಿಲ್ ನಿರಾಕರಿಸಿದರು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದೆ. ಕಾಂಗ್ರೆಸ್ನವರ ಜೊತೆ ಮಾತನಾಡುತ್ತೇನೆ. ದೊಡ್ಡವರು ಕೂಡ ಕುಳಿತು ಮಾತನಾಡ್ತಾರೆ. ಹೀಗಾಗಿ ಕಾಂಗ್ರೆಸ್ನವರು ನನಗೆ ಸಪೋರ್ಟ್ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸುಮಲತಾ ಅವರ ಸ್ಪರ್ಧೆ ಬಗ್ಗೆ ಮಾತನಾಡಿ, ಸುಮಕ್ಕನ ಬಗ್ಗೆ ನನಗೆ ಗೌರವವಿದೆ. ಆದರೆ ಅವರ ಸ್ಪರ್ಧೆ ಬಗ್ಗೆ ನಾನು ಮಾತನಾಡಲ್ಲ. ಸುಮಲತಾ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಅಭಿ ನನ್ನ ತಮ್ಮನ ರೀತಿ. ಅಂಬರೀಶ್ ಅವರು ನನ್ನನ್ನು ಮಗನ ರೀತಿ ಕಾಣುತ್ತಿದರು. ಅವರ ಬಗ್ಗೆ ತುಂಬಾ ಗೌರವವಿದೆ. ಕುರುಕ್ಷೇತ್ರ ಚಿತ್ರ ಚಿತ್ರೀಕರಣದ ಸಮಯ ಅವರ ಜೊತೆ ತುಂಬಾ ಸಮಯ ಕಳೆದಿದ್ದೇನೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos