ಮನೆ ಖಾಲಿ ಮಾಡಲು ಕಾಲಾವಕಾಶ ಕೇಳಿದ ಯಶ್ ತಾಯಿ

ಮನೆ ಖಾಲಿ ಮಾಡಲು ಕಾಲಾವಕಾಶ ಕೇಳಿದ ಯಶ್ ತಾಯಿ

ಬೆಂಗಳೂರು, ಮಾ.23, ನ್ಯೂಸ್ ಎಕ್ಸ್ ಪ್ರೆಸ್: ಕನ್ನಡ ಚಿತ್ರರಂಗದ ನಟ ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾ. 31ರೊಳಗೆ ಖಾಲಿ ಮಾಡಬೇಕಾಗಿತ್ತು.

ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ,ನಮಗೆ ಇನ್ನೂ 6 ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ ಬಾಡಿಗೆ ಮನೆಯಲ್ಲಿ 6 ತಿಂಗಳು ವಾಸ್ತವ್ಯ ಮುಂದುವರೆಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಪುಷ್ಪಾ ಕೋರಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos