ಮಂಗಳೂರಿಗೆ ನಾಳೆ ಮೋದಿ

ಮಂಗಳೂರಿಗೆ ನಾಳೆ ಮೋದಿ

ಮಂಗಳೂರು, ಏ. 12, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಾರಕ್ಕೆ ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಸಂಜೆ 4 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನ ದಲ್ಲಿ ಬೃಹತ್ ಸಭೆ ನಡೆಸಲಿದ್ದಾರೆ.

ನಾಳೆ ಮಧ್ಯಾಹ್ನ 2.45 ಕ್ಕೆ ಮುಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಪ್ರಧಾನ ಮೋದಿ, ಸಂಜೆ 4 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಬಳಿಕ ರಸ್ತೆ ಮಾರ್ಗದ ಮೂಲಕ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮೋದಿ ರ್ಯಾ ಲಿ ಐತಿಹಾಸಿಕವಾಗಿ ನಡೆಸಲು ಬಿಜೆಪಿ ಪ್ಲಾನ್ ಮಾಡಿದ್ದು ದಾಖಲೆ ಸಂಖ್ಯೆಯಲ್ಲಿ ಜನ ಸೇರಿಸಲು ಸಿದ್ದತೆ ಮಾಡಿದೆ.

ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos