ಭಾರಿ ಮಳೆಗೆ ಮಂಗಳೂರಿನಲ್ಲಿ ಮನೆ ಕುಸಿತ

ಭಾರಿ ಮಳೆಗೆ ಮಂಗಳೂರಿನಲ್ಲಿ ಮನೆ ಕುಸಿತ

ಮಂಗಳೂರು, ಜೂನ್. 13: ವಾಯು ಭಾರ ಕುಸಿತದಿಂದ ಮಂಗಳೂರಿನ ಸಮುದ್ರದಲ್ಲಿ ಕಡಲ ಅಲೆಗಳ ಅಬ್ಬರಕ್ಕೆ ಉಳ್ಳಾಲದ ಕಡಲ ತೀರದಲ್ಲಿನ ಮನೆಗಳು  ಕುಸಿದು ಬಿದ್ದಿರುವ ದೃಶ್ಯಗಳು ಕ್ಯಾಮೆರದಲ್ಲಿ ಸೆರೆಯಾಗಿವೆ. ಅನೇಕ ಮನೆಗಳು ಸಮುದ್ರ ಪಾಲಾಗಿವೆ. ಜಿಲ್ಲೆಯ ಉಳ್ಳಾಲ, ಉಚ್ಚಿಲ, ಸೋಮೇಶ್ವರ ಸಮುದ್ರ ತೀರಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ ಜಿಲ್ಲಾದ್ಯಂತ ಬುಧವಾರ ರಾತ್ರಿಯಿಂದ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಳೆ ಅಪಾಯ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿಯಿಡೀ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ನಗರದ ರಸ್ತೆಗಳು ಜಲಾವೃತಗೊಂಡಿವೆ. ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos